ಮಂಗಳೂರು : ನಗರದಲ್ಲಿ ಗುರುವಾರ ನಡೆದ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ತಕ್ಷಣದಿಂದಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್), 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಈ ಆದೇಶವು ಶುಕ್ರವಾರ ಬೆಳಿಗ್ಗೆ 6:00 ಗಂಟೆಯಿಂದ (ಮೇ 2, 2025) ಜಾರಿಗೆ ಬಂದಿದ್ದು, ಮೇ 6, 2025 ರ ಬೆಳಿಗ್ಗೆ 6:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎನ್ನಲಾಗಿದೆ.
ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ನಿರ್ಬಂಧಗಳನ್ನು ತಕ್ಷಣದಿಂದಲೇ ಜಾರಿಗೆ ತಂದಿದ್ದು, ಈ ಘಟನೆಯ ನಂತರ ಯಾವುದೇ ಸಂಭವನೀಯ ಉದ್ವಿಗ್ನತೆ ಹೆಚ್ಚಾಗುವುದನ್ನು ತಡೆಯುವುದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವುದು ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಲಾಗಿದೆ.