ಮಂಗಳೂರು: ವಿವಾಹವಾಗುವಂತೆ ಪೀಡಿಸುತ್ತಿದ್ದ ಪ್ರೇಮಿಯೋರ್ವನು ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆಕೆಯ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ನಗರದ ಹೊರವಲಯದ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕೊಡ್ಮಾಣ್ ನಿವಾಸಿ ಸುಧೀರ್(30) ಆತ್ಮಹತ್ಯೆ ಮಾಡಿಕೊಂಡ ಪಾಗಲ್‌ಪ್ರೇಮಿ.
ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಸುಧೀರ್ ಕಳೆದ 8ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಆದರೆ ಕಳೆದ ಕೆಲ ತಿಂಗಳುಗಳಿಂದ ಇವರ ನಡುವೆ ಮನಸ್ತಾಪ ಉಂಟಾಗಿತ್ತು. ಆದರೂ ಸುಧೀರ್ ಆಕೆಗೆ ಫೋನ್ ಮಾಡುವುದು, ಹಿಂಬಾಲಿಸುವುದು ಮಾಡುತ್ತಿದ್ದ.
ಅದರಂತೆ ಸೋಮವಾರ ಬೆಳಗ್ಗೆಯೂ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದು ದಿವ್ಯಾಳನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಇಬರ ನಡುವೆ ವಾಗ್ವಾದ ನಡೆದು ಗಲಾಟೆ ನಡೆದಿರುತ್ತದೆ. ಈ ವೇಳೆ ಸುಧೀರ್ ತಾನು ತಂದಿದ್ದ ಚೂರಿಯಿಂದ ದಿವ್ಯಾಳಿಗೆ ಇರಿದಿದ್ದಾನೆ. ಈ ವೇಳೆ ಆಕೆ ತಪ್ಪಿಸಿಕೊಳ್ಳಲು ಹೋಗಿ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಸುಧೀರ್ ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಬೆದರಿದ ಸುಧೀರ್ ಅಲ್ಲಿಂದ ನೇರವಾಗಿ ದಿವ್ಯಾಳ ಬಾಡಿಗೆ ಮನೆಗೆ ಹೋಗಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ತನಿಖೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.