ಮಂಗಳೂರು: ಎರಡು ದಿನಗಳು ಕಳೆದ್ರೆ ನಾವು 2025ನೇ ಹೊಸ ವರ್ಷವನ್ನು ಸ್ವಾಗತಿಸಲಿದ್ದೇವೆ. ಈ ಸಂದರ್ಭವನ್ನು ಬಳಸಿ ಸೈಬರ್ ಖದೀಮರು ಹಾನಿಕಾರಕ ಲಿಂಕ್ ಹಾಗೂ ಎಪಿಕೆ ಫೈಲ್‌ಗಳನ್ನು ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ.
ಆದ್ದರಿಂದ ಹೊಸವರ್ಷದ ಶುಭಾಶಯ ಕೋರುವ ಎಪಿಕೆ ಫೈಲ್, ಲಿಂಕ್‌ಗಳನ್ನು ತೆರೆಯದಿರಿ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸೂಚಿಸಿದ್ದಾರೆ. 2025ನೇ ಹೊಸವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತು APK ಫೈಲ್‌ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ.
ಬಳಿಕ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸ್ಆ್ಯಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆಯಿದೆ.
ಆದ್ದರಿಂದ ಸಾರ್ವಜನಿಕರು ತಮ್ಮ ಮೊಬೈಲ್‌ಗಳಿಗೆ ಹೊಸವರ್ಷದ ಶುಭಾಶಯ ಕೋರಿ ಬರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು APK ಫೈಲ್‌ಗಳನ್ನು ತಕ್ಷಣ ಡಿಲೀಟ್ ಮಾಡಬೇಕು. ಯಾವುದೇ ಕಾರಣಕ್ಕೂ ಈ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ. ಇಂತಹ ಲಿಂಕ್ ಮತ್ತು APK ಫೈಲ್‌ಗಳನ್ನು ಯಾವುದಾದರೂ ವಾಟ್ಸ್ಆ್ಯಪ್ ಗ್ರೂಪ್‌ಗಳಿಗೆ ಪರಿಚಿತ ವಾಟ್ಸ್ಆ್ಯಪ್ ಸಂಖ್ಯೆಯಿಂದಲೇ ಬಂದಲ್ಲಿ ಗ್ರೂಪ್ ಅಡ್ಮಿನ್‌ಗಳು ಅಂತಹ ಲಿಂಕ್ ಮತ್ತು APK ಫೈಲ್‌ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ತಿಳಿಸಿದ್ದಾರೆ. ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930ಕ್ಕೆ ಕರೆ ಮಾಡಿ ಅಥವಾ www.cybercrime.gov.in ಈ ವೆಬ್‌ಸೈಟ್‌ನಲ್ಲಿ ದೂರನ್ನು ದಾಖಲಿಸಲು ಪೊಲೀಸ್ ಕಮಿಷನರ್ ಸೂಚಿಸಿದ್ದಾರೆ.