ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ ಸಂಭವಿಸಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಎರಡು ಕಡೆ ಭೂಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿನ ಭೂಕುಸಿತದಿಂದ ವಾಹನ ಸವಾರರು ಆತಂಕಕ್ಕೆ ಒಳಗಾಗಿದ್ದಾರೆ. ಮಳೆಯಿಂದಾಗಿ ಕೆರೆ ಕೋಡಿಗಳು ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿದೆ.
ಹಾಸನ, ಮೇ 25: ಅವಧಿಗೂ ಮುನ್ನ ಕರ್ನಾಟಕದಲ್ಲಿ ಮುಂಗಾರು ಮಳೆ (rain) ಶುರುವಾಗಿದೆ. ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಇದೀಗ ಶಿರಾಡಿ ಘಾಟ್ ರಸ್ತೆಯಲ್ಲಿ (Shiradi Ghat Road) ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಸ್ತೆಗೆ ಮಣ್ಣು ಕುಸಿಯುತ್ತಿದೆ