ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್ ಇಡೀ ಕರಾವಳಿ ನಗರಿಯನ್ನೇ ಬೆಚ್ಚಿಬೀಳಿಸಿದೆ. ಹಂತಕರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗ್ತಿದೆ. ಅಷ್ಟೇ ಅಲ್ಲದೇ 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಸುಹಾಸ್ ಹತ್ಯೆಗೆ ಹಿಂದೂ ಯುವಕರೇ ಸಾಥ್ ಕೊಟ್ರಾ ಎನ್ನುವ ಪ್ರಶ್ನೆ ಕೂಡ ಶುರುವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಇಬ್ಬರು ಯುವಕರನ್ನು ಬಂಧಿಸಲಾಗಿದೆ. ಮಂಗಳೂರಿನ ಖ್ಯಾತ ಸಫ್ವಾನ್ ಗ್ಯಾಂಗ್ಗೆ ಈ ಇಬ್ಬರು ಯುವಕರು ಸಹಾಯ ಮಾಡುತ್ತಿದ್ದರೆಂಬ ಮಾಹಿತಿ ತಿಳಿದು ಬಂದಿದೆ. ಇಬ್ಬರು ಯುವಕರನ್ನ ವಶಕ್ಕೆ ಪಡೆಯಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾಗಿರುವ ಕಳಸದ ಇಬ್ಬರು ಯುವಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.