ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಮತ್ತೊಬ್ಬ ಆರೋಪಿಯನ್ನುಅರೆಸ್ಟ್ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿತ ಆರೋಪಿ. ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ ಬಂಧಿಸಲಾಗಿದೆ.
ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.