ಚಿಕ್ಕಮಗಳೂರು: ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಮನೆಯವರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಮೀಪದ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

































