ಇಂಫಾಲ್: ಫೆಬ್ರವರಿ 10ರಿಂದ ಪ್ರಾರಂಭವಾಗಬೇಕಿದ್ದ 12ನೇ ಮಣಿಪುರ ವಿಧಾನಸಭೆಯ ಏಳನೇ ಅಧಿವೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ “ಶೂನ್ಯ ಮತ್ತು ಅನೂರ್ಜಿತ” ಎಂದು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಘೋಷಿಸಿದ್ದಾರೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಇಂಫಾಲ್ನ ರಾಜಭವನದಲ್ಲಿ ರಾಜ್ಯಪಾಲ ಅಜಯ್ ಭಲ್ಲಾ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ನಂತರ ಇದು ಸಂಭವಿಸಿದೆ. ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನಿನ್ನೆ (ಭಾನುವಾರ) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಪಾಲ್ನಲ್ಲಿ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಬಲ್ಲಾ ಅವರನ್ನು ಭೇಟಿಯಾದ ಬಿರೆನ್ ಸಿಂಗ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
