ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮಾಡುವ ಸಂಬಂಧ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗ ನಗರಸಭೆ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ರೇಣುಕಾ ಅವರು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರಿಗೆ ಚಿತ್ರದುರ್ಗ ನಗರದ ನಕಾಶೆಯನ್ನು ತೋರಿಸಿ ವಿವರಣೆಯನ್ನು ನೀಡಿದ್ದಾರೆ.
ಚಿತ್ರದುರ್ಗ ನಗರವನ್ನ ಮಹಾನಗರ ಪಾಲಿಕೆಯನ್ನಾಗಿಸಲು ಈಗಾಗಲೇ ಅಧಿಕಾರಿಗಳ ಜೊತೆ ಸಂಲೋಚನೆ ನಡೆಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಕಾಶೆಯನ್ನು ತಯಾರಿಸಲಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚನೆಯನ್ನು ನಡೆಸಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.