ಬೀಜಿಂಗ್ : ಇಂದು ಮುಂಜಾನೆ ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಟಿಬೆಟ್‌ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವ ಉಂಟಾಗಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ.ಚೀನಾದ ನ್ಯೂಸ್ ಏಜೆನ್ಸಿ ಯೊಂದು 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನ ಮನೆಯಿಂದ ಹೊರಗಡೆ ಓಡಿಕೊಂಡು ಬಂದಿರುವ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.