ದಾವಣಗೆರೆ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರಿಗೆ ತಿಳಿಯಪಡಿಸುವುದೇನೆಂದರೆ ಮೇ 1 ರಂದು ಶ್ರೀ ಬುದ್ಧ ಪೂರ್ಣಿಮ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಆದ್ದರಿಂದ ಸದರಿ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































