Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

MI vs GT, IPL 2023: ಐಪಿಎಲ್​ನಲ್ಲಿಂದು ಮುಂಬೈ-ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ

0

Mumbai vs Gujarat: ಮುಂಬೈ ತಂಡ ಬ್ಯಾಟಿಂಗ್​ನಲ್ಲಿ ಸಾಕಷ್ಟು ಬಲಿಷ್ಠವಾಗಿದೆ. ಎಷ್ಟೇ ದೊಡ್ಡ ಮೊತ್ತದ ಟಾರ್ಗೆಟ್ ಇದ್ದರೂ ಸುಲಭವಾಗಿ ಗೆಲುವು ಸಾಧಿಸುತ್ತಿದೆ. ಇದಕ್ಕೆ ಹಿಂದಿನ ಮೂರು ಪಂದ್ಯಗಳೇ ಸಾಕ್ಷಿ. 200+ ಟಾರ್ಗೆಟ್ ನೀಡಿದ್ದರೂ ರೋಹಿತ್ ಪಡೆ ಜಯ ಸಾಧಿಸಿದೆ.

16ನೆ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ (MI vs GT) ಮುಖಾಮುಖಿ ಆಗಲಿದೆ. ಮುಂಬೈ 11 ಪಂದ್ಯಗಳನ್ನು ಆಡಿದ್ದು ಆರು ಜಯ, ಐದು ಪಂದ್ಯಗಳಲ್ಲಿ ಸೋಲುಂಡು 12 ಅಂಕ ಪಡೆದು ನಾಲ್ಕನೇ ಸ್ಥಾನದಲ್ಲಿದೆ. ಇತ್ತ ಜಿಟಿ ಈವರೆಗೆ ಆಡಿರುವ 11 ಪಂದ್ಯಗಳ ಪೈಕಿ ಕೇವಲ ಮೂರರಲ್ಲಿ ಸೋಲು, 8 ರಲ್ಲಿ ಗೆಲುವು ಸಾಧಿಸಿ 16 ಅಂಕ ಪಡೆದು ಅಗ್ರಸ್ಥಾನದಲ್ಲಿದೆ. ಹೀಗಾಗಿ ಗುಜರಾತ್ ಇಂದಿನ ಪಂದ್ಯ ಗೆದ್ದರೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದ ಮೊದಲ ತಂಡ ಆಗಲಿದೆ.

ಮಂಗಳೂರು: ಕದ್ರಿ ದೇಗುಲಕ್ಕೆ ರಾತ್ರಿ ಅನ್ಯಮತೀಯ ಯುವಕರ ಪ್ರವೇಶ- ಪೊಲೀಸರ ತೀವ್ರ ವಿಚಾರಣೆ

ಮುಂಬೈ:

ಮುಂಬೈ ತಂಡ ಬ್ಯಾಟಿಂಗ್​ನಲ್ಲಿ ಸಾಕಷ್ಟು ಬಲಿಷ್ಠವಾಗಿದೆ. ಎಷ್ಟೇ ದೊಡ್ಡ ಮೊತ್ತದ ಟಾರ್ಗೆಟ್ ಇದ್ದರೂ ಸುಲಭವಾಗಿ ಗೆಲುವು ಸಾಧಿಸುತ್ತಿದೆ. ಇದಕ್ಕೆ ಹಿಂದಿನ ಮೂರು ಪಂದ್ಯಗಳೇ ಸಾಕ್ಷಿ. 200+ ಟಾರ್ಗೆಟ್ ನೀಡಿದ್ದರೂ ರೋಹಿತ್ ಪಡೆ ಜಯ ಸಾಧಿಸಿದೆ. ಆದರೆ, ನಾಯಕ ರೋಹಿತ್ ಶರ್ಮಾ ಅವರ ಸತತ ಕಳಪೆ ಪ್ರದರ್ಶನ ತಂಡಕ್ಕೆ ದೊಡ್ಡ ಚಿಂತೆ. ಈ ಟೂರ್ನಿಯಲ್ಲಿ ಹಿಟ್​ಮ್ಯಾನ್ ಕಡೆಯಿಂದ ಉತ್ತಮ ಆಟ ಬಂದಿಲ್ಲ. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೀರ ಭರ್ಜರಿ ಫಾರ್ಮ್​ನಲ್ಲಿದ್ದು ರನ್ ಕಲೆಹಾಕುತ್ತಿದ್ದಾರೆ. ಜೇಸನ್ ಬೆಹ್ರೆಂಡಾರ್ಫ್, ಗ್ರೀನ್, ಕ್ರಿಸ್ ಜೋರ್ಡನ್, ಆಕಾಶ್ ಮಧ್ವಾಲ್ ಇನ್ನಷ್ಟು ಮಾರಕವಾಗಬೇಕಿದೆ. ಪಿಯೂಷ್ ಚಾವ್ಲಾ ಮಾತ್ರ ಮುಂಬೈ ಬೌಲಿಂಗ್​ನಲ್ಲಿ ಎದುರಾಳಿಗೆ ಕಂಠಕವಾಗಿ ಪರಿಣಮಿಸಿದ್ದಾರೆ.

ಗುಜರಾತ್:

ಜಿಟಿ ತಂಡದ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ನಾಯಕ ಹಾರ್ದಿಕ್ ಪಾಂಡ್ಯ ಲಯಕಂಡುಕೊಂಡಿರುವುದು ದೊಡ್ಡ ಪ್ಲಸ್ ಪಾಯಿಂಟ್. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಅಭಿನವ್ ಮನೋಹರ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿ ಗುರುತಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ರಮಣದೀಪ್ ಸಿಂಗ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್, ವಿಷ್ಣು ವಿನೋದ್, ರಿಲೆ ಮೆರೆಡಿತ್, ಶಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ತಿಲಕ್ ವರ್ಮಾ, ಹೃತಿಕ್ ಶೋಕೀನ್, ಡುವಾನ್ ಜಾನ್ಸೆನ್, ಸಂದೀಪ್ ವಾರಿಯರ್, ಜೇಸನ್ ಬೆಹ್ರೆಂಡಾರ್ಫ್.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

 

Leave A Reply

Your email address will not be published.