ಬೆಳಗಾವಿ : ಸಚಿವ ಭೈರತಿ ಸುರೇಶ್ ಸದನದಲ್ಲಿ ಮಾತನಾಡಿ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿರುವುದು ಸಿಎಂ ಸಿದ್ದರಾಮಯ್ಯಗೆ ಅಲ್ಲ, ಬಿವೈ ವಿಜಯೇಂದ್ರಗೆ ಎಂದು ಸದನದಲ್ಲಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಸಚಿವ ಭೈರತಿ ಸುರೇಶ್ ಸಿಎಂ ಸಿದ್ದರಾಮಯ್ಯಗೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಮುಹೂರ್ತ ಫಿಕ್ಸ್ ಆಗಿರುವುದು ಯಡಿಯೂರಪ್ಪ ಮಗ ಬಿವೈ ವಿಜಯೇಂದ್ರ ರಾಜೀನಾಮೆ ಕೊಡಲಿಕ್ಕೆ, ನಮ್ಮ ಪಕ್ಷದ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಅಲ್ಲ, ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.