ಚಿತ್ರದುರ್ಗ: ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು.
ದೇಹ ತೊರೆದ ಸಚಿವರ ಆತ್ಮ ಕರ್ಮ ಬಂಧಗಳನ್ನು ತೊರೆದು ಸಿದ್ದಶಿಲಾ ಲೋಕಕ್ಕೆ ಪಯಣ ಬೆಳಿಸಿತು. ಸದಾಕಾಲ ಹಸ್ಮಮುಖಿ ಹಾಗೂ ಜನಾನುರಾಗಿಯಾಗಿದ್ದ ಸಚಿವ ಡಿ.ಸುಧಾಕರ್ ಅವರಿಗೆ ಕುಟುಂಬಸ್ಥರು, ಸಂಬಂಧಿಗಳು, ಸಾರ್ವಜನಿಕರು ಅಶೃತರ್ಪಣದ ಮೂಲಕ ಅಂತಿಮ ವಿದಾಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ರಾಜ್ಯ ಸರ್ಕಾರ ಸಚಿವ ಸಂಪುಟದ ಸಹದ್ಯೋಗಿ ಸಚಿವರುಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.
ಸರ್ಕಾರದ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಪೆÇಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ 3ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ಮೊಳಗಿಸಿತು. ಒಂದು ನಿಮಿಷದ ಮೌನಾಚರಣೆ ಆಚರಿಸಿಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಸಚಿವರ ಪತ್ನಿಗೆ ಹಸ್ತಾಂತರಿಸಿ, ಕುಟುಂಬ ವರ್ಗದವರನ್ನು ಸಂತಹಿಸಿದರು.
ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್,ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಸರಬಾಜು ಸಚಿವ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅರಣ್ಯ ಸಚಿವ ಈಶ್ವರ ಖಂಡ್ರೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕೊಡುಗು ವಿರಾಜಪೇಟೆ ಶಾಸಕ ಪಿ.ಎಸ್.ಪೊನ್ನಣ್ಣ, ಕುಣಿಗಲ್ ಶಾಸಕ ರಂಗನಾಥ್, ಶಿಗ್ಗಾವಿ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಮಾಜಿ ಸಚಿವರಾದ ಹೆಚ್.ಆಂಜನೇಯ, ವೆಂಕಟರಮಣಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ದಾವಣಗೆರೆ ವಲಯ ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್. ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಅಭಿಮಾನಿಗಳು ಉಪಸ್ಥಿತರಿದ್ದರು.





























