ವಿಶ್ವದಾದ್ಯಂತ ಗುಲ್ಲೆಬ್ಬಿಸಿರುವ ಚೀನಾದ HMPV ವೈರಸ್ ಕರ್ನಾಟಕಕ್ಕೂ ಕಾಲಿಟ್ಟಿದ್ದು ಇದೀಗ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂದು ICMR ತಿಳಿಸಿದೆ.
ಚೀನಾದ HMPV ವೈರಸ್ ಈಗಾಗಲೇ ಭಾರತ ಸೇರಿದಂತೆ ಜಾಗತಿಕವಾಗಿ ಆತಂಕ ಸೃಷ್ಟಿಸಿದ್ದು, ಇದರೊಂದಿಗೆ ಉಸಿರಾಟದ ಕಾಯಿಲೆಗಳ ಪ್ರಕರಣಗಳು ವಿವಿಧ ದೇಶಗಳಲ್ಲಿ ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು , ಇಂದು 12.30ಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದಿದ್ದಾರೆ.