ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವೆ, ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ.
ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.