ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಮಾತಿಗೆ ಕಾಂಗ್ರೆಸ್ ಸದಸ್ಯರು ಕೆರಳಿ ಕೆಂಡವಾಗಿದ್ದಾರೆ. ತಮ್ಮ ವಿರುದ್ಧ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕಣ್ಣೀರು ಹಾಕಿದ್ದಾರೆ.
ವಿಧಾನಪರಿಷತ್ ಕಲಾಪದಲ್ಲಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಸಿ.ಟಿ ರವಿ ಮಾತಿಗೆ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನವನ್ನು ಅರ್ಧ ಗಂಟೆಗಳ ಕಾಲ ಮುಂದೂಡಿಕೆ ಮಾಡಿದ್ದಾರೆ.
ಅಶ್ಲೀಲ ಪದ ಬಳಕೆ ನೊಂದಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಭಾಪತಿ ಬಸವರಾಜ ಹೊರಟ್ಟಿ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನದ ಅಷ್ಟು ಆಡಿಯೋ, ವಿಡಿಯೋ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ಬಸವರಾಜ ಹೊರಟ್ಟಿ ಅವರ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದು, ಸಿ.ಟಿ ರವಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ
ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಸಿ.ಟಿ. ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ವೇ* ಎಂದು ಹೇಳಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.
ಸಭಾಪತಿ ಜೊತೆ ಕಾಂಗ್ರೆಸ್ ನಾಯಕರ ಸಭೆ
ಅಶ್ಲೀಲ ಪದ ಬಳಿಕೆ ಮಾಡಿರುವ ಸಿಟಿ ರವಿ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಕಾಂಗ್ರೆಸ್ ನಾಯಕರು ಕಾನೂನ ಪರಿಣಿತರ ಜೊತೆ ಚರ್ಚೆ ನಡೆಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಚೇಂಬರ್ ನಲ್ಲಿ ಡಿಸಿಎಙ ಡಿ ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ., ಬೋಸರಾಜ್ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್ ಕೆ ಪಾಟೀಲ್ ಮಾತುಕತೆ ನಡೆಸಿದ್ದಾರೆ. ಅಲ್ಲದೇ
ಸಿ.ಟಿ. ಮಾತಿಗೆ ಮಾಜಿ ಸಚಿವೆ ಉಮಾಶ್ರೀ ಖಂಡನೆ
ಮಾಜಿ ಸಚಿವ ಉಮಾಶ್ರೀ ಪ್ರತಿಕ್ರಿಯಿಸಿ, ಯಾವ ಹೆಣ್ಣೂ ಸಹ ನನ್ನನ್ನ ಪ್ರಾಸಿಟ್ಯೂಟ್ ಅಂದ್ರು ಅಂತ ಸುಳ್ಳು ಅಥವಾ ಸುಮ್ಮನೆ ಹೇಳುವುದಿಲ್ಲ. ಸಿ.ಟಿ ರವಿ ಆ ಪದ ಬಳಕೆ ಮಾಡಿದ್ದು ನಿಜ/ ನಮ್ಮ ನಾಯಕ ರಾಹುಲ್ ಗಾಂಧಿ ಬಗ್ಗೆ ಡ್ರಗ್ ಅಡಿಕ್ಟ್ ಎಂದು ಮಾತನಾಡಿದ್ರು ಆಗ ನೀವು ಅಪಘಾತದಲ್ಲಿ ಇಬ್ಬರ ಕೊಲೆ ಮಾಡಿದ್ದೀರಿ, ಕೊಲೆಗಡುಕರು ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಕೂಗಿದ್ರು.. ಆಗ ಸಿ.ಟಿ. ರವಿ ಪ್ರಾಸಿಟ್ಯೂಟ್ ಅಂತ 10 ಬಾರೀ ಕೂಗಿದ್ರು. ಕೂಗಿದ್ದು ನಿಜ. ಸಭಾಪತಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.