ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಿಟಿ ರವಿ ನಿಂದನೆ ಆರೋಪ ಪ್ರಕರಣದಲ್ಲಿ ಸಿಟಿ ರವಿ ವಿಚಾರಣೆ ಬೆನ್ನಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ದಾಖಲಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಎರಡು ದಿನದ ಹಿಂದಷ್ಟೇ ಸಿಟಿ ರವಿ ವಿಚಾರಣೆ ನಡೆಸಿದ್ದ ಸಿಐಡಿ ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ 164 ಹೇಳಿಕೆ ದಾಖಲಿಸಲು ಮುಂದಾಗಿದ್ದಾರೆ. ಎಸಿಎಂಜೆ 4ರ ನ್ಯಾಯಾಲಯದಲ್ಲಿ 164 ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಲಾಗಿತ್ತು. ಆದ್ರೆ ಅಲ್ಲಿ ಪುರುಷ ನ್ಯಾಯಾಧೀಶರಿರೋ ಕಾರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹಿಳಾ ನ್ಯಾಯಾಧೀಶರ ಮುಂದೆ ಮಾತ್ರ 164 ಹೇಳಿಕೆ ನೀಡ್ತೀನಿ ಎಂದಿದ್ದಾರೆ. ಹೀಗಾಗಿ ಸಿಐಡಿ ಅಧಿಕಾರಿಗಳು ಮಹಿಳಾ ನ್ಯಾಯಾಧಿಶರ ಮುಂದೆ ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಕೋರ್ಟ್ ನಿಂದ ಅನುಮತಿ ಸಿಕ್ಕ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 164 ಹೇಳಿಕೆಯನ್ನ ಸಿಐಡಿ ಅಧಿಕಾರಿಗಳು ದಾಖಲಿಸಲಿದ್ದಾರೆ.
