ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಸ್ವತಹ ಸಚಿವ ಪ್ರಿಯಾಂಕ್ ಅವರೇ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು ಮತ್ತು ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ.
ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.