ಬೆಂಗಳೂರು: ಶಾಸಕ ಸ್ಥಾನ ಅಸಿಂಧುಗೊಳಿಸಬೇಕು ಎಂಬ ಅರ್ಜಿ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆಗೆ ಹೈಕೋರ್ಟ್ ಸಮನ್ಸ್ ನೀಡಿದೆ.
ಗ್ಯಾರೆಂಟಿ ಯೋಜನೆ ಬಗ್ಗೆ ಮತದಾರರಿಗೆ ಪ್ರಿಯಾಂಕ್ ಆಮಿಷ ಒಡ್ಡಿದ್ದಾರೆ. ಆದರೆ, ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಆಮಿಷ ಒಡ್ಡುವಂತಿಲ್ಲ ಎಂದು ಅಶ್ವತ್ಥ್ ರಾಮ್ ಎಂಬುವವರು ಅರ್ಜಿ ಸಲ್ಲಿಸಿದ್ದರು.
ಅಲ್ಲದೆ, ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣ ಪತ್ರ ಸಹ ಸಮರ್ಪಕವಾಗಿಲ್ಲ ಎಂದೂ ದೂರಿದ್ದರು. ಈ ಬಗ್ಗೆ ಹೈಕೋರ್ಟ್ ಸಮನ್ಸ್ ನೀಡಿ, ಸೆ.25ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ.