ಬೆಂಗಳೂರು : ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಅಂದರೆ ನಾಳೆ ಮುಜರಾಯಿ ವ್ಯಾಪ್ತಿಗೊಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ಮಾಡಲು ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ.!
ಈ ಬಗ್ಗೆ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಮೌಖಿಕ ಆದೇಶ ಹೊರಡಿಸಿದ್ದಾರೆ.
ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು ಎಂದು ಹೇಳಿದ್ದಾರೆ.