ನವದೆಹಲಿ: ಪಾಕಿಸ್ತಾನದೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವ ಉದ್ದೇಶ ಭಾರತಕ್ಕೆ ಇಲ್ಲ, ಆದರೆ ದೇಶದ ಮೇಲೆ ಮಿಲಿಟರಿ ದಾಳಿಗಳು ನಡೆದರೆ, ಅದಕ್ಕೆ ತುಂಬಾ ದೃಢವಾದ ಪ್ರತಿಕ್ರಿಯೆ ನೀಡಲಾಗುವುದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಗುರುವಾರ ಹೇಳಿದ್ದಾರೆ.
ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರೊಂದಿಗಿನ ಸಭೆಯಲ್ಲಿ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ. “ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದು ನಮ್ಮ ಉದ್ದೇಶವಲ್ಲ. ಆದಾಗ್ಯೂ, ನಮ್ಮ ಮೇಲೆ ಮಿಲಿಟರಿ ದಾಳಿಗಳು ನಡೆದರೆ, ಅದಕ್ಕೆ ಅತ್ಯಂತ ದೃಢವಾದ ಪ್ರತಿಕ್ರಿಯೆ ನೀಡಲಾಗುವುದು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ಅವರು ಹೇಳಿದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್ ವಿದೇಶಾಂಗ ಸಚಿವರು ನಿನ್ನೆ ರಾತ್ರಿ ವೇಳೆಗೆ ನವದೆಹಲಿಗೆ ಭೇಟಿ ನೀಡಿದರು.