ಬೆಂಗಳೂರು: ರೈಲ್ವೆ ನೇಮಕಾತಿ ಸೂಪರಿಂಟೆಂಡೆಂಟ್ ಮಂಡಳಿಯ ನರ್ಸಿಂಗ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು. ವಿದ್ಯಾಕೇಂದ್ರ ಈ ಪರೀಕ್ಷಾ ಕೇಂದ್ರ. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಂಗಳಸೂತ್ರ, ಜನಿವಾರ ತೆಗೆದು ಪರೀಕ್ಷೆಗೆ ಹಾಜರಾಗುವಂತೆ ಪ್ರವೇಶ ಪತ್ರದಲ್ಲಿ ಸೂಚನೆ ನೀಡಿತ್ತು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.