ಬೆಂಗಳೂರು : ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ಸಂಜೆ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ಆರ್ ಪಾಟೀಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಈ ಹಿಂದೆ ಅನುದಾನದ ವಿಚಾರದಲ್ಲಿ ಬಿ.ಆರ್ ಪಾಟೀಲ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ೪೦ ವರ್ಷದ ಜನತಾ ಪರಿವಾರದ ನಂಟು ಹೊಂದಿದ್ದ ಬಿ.ಆರ್ ಪಾಟೀಲ್ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ್ದರು ಎಂಬ ಕಾರಣಕ್ಕಾಗಿ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಈ ಬಾರಿ ಅಳಂದ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಕೂಡಾ ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದರು. ಇದಾದ ಬೆನ್ನಲ್ಲೇ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅವರು ಅಸಮಾಧಾನಗೊಂಡಿದ್ದರು. ಸಚಿವ ಸ್ಥಾನ ವಂಚಿತರಾದ ನಂತರ ಆಗಾಗಾ ಬಹಿರಂಗವಾಗಿ ಬೇಸರ ವ್ಯಕ್ತಪಡಿಸುತ್ತಿದ್ದರು.
ಸಿಎಂ ಸಲಹೆಗಾರರಾಗಿ ನೇಮಕಗೊಂಡ ಬಳಿಕ ಸಮಾಧಾನಗೊಂಡಿದ್ದ ಅವರು, ಶಾಸಕರ ಅನುದಾನದ ಬಗ್ಗೆ ಅಸಮಾಧಾನ ಹೊಂದಿದ್ದರು. ಇದೀಗ ದಿಢೀರನೆ ಸಿಎಂ ಸಲಹೆಗಾರ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದಾರೆ.