ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕು ಡಿ.ಎಸ್. ಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕ್ಯಾದಿಗೆರೆ ಗ್ರಾಮದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ವಲಯ ಬ್ಯಾಲೆನ್ಸಿಂಗ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಶನಿವಾರ ಭೂಮಿಪೂಜೆ ನೆರವೇರಿಸಿದರು.
ಕ್ಯಾದಿಗೆರೆ ಗ್ರಾಮದ ಮಟ್ಟಿ ಬಸವೇಶ್ವರ ದೇವಸ್ಥಾನದ ಬಳಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಅವರು, 452 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ವಾಣಿ ವಿಲಾಸ ಸಾಗರ ಜಲಾಶಯದಿಂದ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕಿನ ಬಿಟ್ಟು ಹೋದ 301 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಉದ್ದೇಶಿಸಲಾಗಿದೆ. ಯೋಜನೆಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 140 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾಮಗಾರಿಗೆ ಸುಮಾರು 250 ಕೋಟಿ ರೂ. ವೆಚ್ಚವಾಗಲಿದೆ. ಇದರಲ್ಲಿ 01 ಮಾಸ್ಟರ್ ಬ್ಯಾಲೆನ್ಸಿಂಗ್ ಟ್ಯಾಂಕ್, 09- ವಲಯ ಬ್ಯಾಲೆನ್ಸಿಂಗ್ ಟ್ಯಾಂಕ್‌ಗಳು ಹಾಗೂ 40 ಓವರ್ ಹೆಡ್ ಟ್ಯಾಂಕ್‌ಗಳು ಇದೇ ಯೋಜನೆಯಲ್ಲಿ ನಿರ್ಮಾಣವಾಗಲಿವೆ. 09 ವಲಯ ಬ್ಯಾಲೆನ್ಸಿಂಗ್ ಟ್ಯಾಂಕ್‌ಗಳ ಪೈಕಿ, ಕ್ಯಾದಿಗೆರೆ ಗ್ರಾಮದಲ್ಲಿ ಒಂದು ಬ್ಯಾಲೆನ್ಸಿಂಗ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ. ಈ ಟ್ಯಾಂಕ್‌ನಿAದ ಡಿ.ಎಸ್. ಹಳ್ಳಿ, ಜೆ.ಎನ್. ಕೋಟೆ, ದ್ಯಾಮವ್ವನಹಳ್ಳಿ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಶಾಸಕ ವೀರೇಂದ್ರ ಪಪ್ಪಿ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಶಿವಣ್ಣ, ಗ್ರಾಮ ಪಂಚಾಯತಿ ಅಧ್ಯಕ್ಷೆ ಶಶಿಕಲಾ ತಿಪ್ಪೇಸ್ವಾಮಿ, ಸದಸ್ಯರುಗಳಾದ ಕಲ್ಲಪ್ಪ, ಲಕ್ಷಿö್ಮÃದೇವಿ, ಕಲ್ಲೇಶ್, ವಿದ್ಯಾವತಿ, ರೆಹಮಾನ್ ಸಾಬ್, ರಾಕೇಶ್, ಮಾರುತಿ ಸಾಲಪಯ್ಯ, ಸುಧಮ್ಮ, ಇಂಗಳದಾಳು ಗ್ರಾ.ಪಂ. ಅಧ್ಯಕ್ಷ ಶಿರವಲಪ್ಪ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಗ್ರಾ.ಪಂ. ಪಿಡಿಒ., ಮುಖಂಡರಾದ ಲಿಂಗಬಸಪ್ಪ, ದೇವೇಂದ್ರಪ್ಪ, ಪಾಪಣ್ಣ, ಚಿತ್ರದುರ್ಗ ನಗರಸಭಾ ಸದಸ್ಯ ರಮೇಶ್ ಮುಂತಾದವರು ಉಪಸ್ಥಿತರಿದ್ದರು.