ರೈತರ ಆರ್ಥಿಕ ಸಬಲೀಕರಣ: ಸಹಕಾರಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದು: ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ:ರೈತರ ಅಭಿವೃದ್ಧಿಗಾಗಿ ಸ್ಥಾಪನೆಯಾಗಿರುವ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳು ರೈತರ ಆರ್ಥಿಕ ಸದೃಢತೆಗೆ ಪ್ರಮುಖ ಆಧಾರವಾಗಿದ್ದು, ಬ್ಯಾಂಕ್‌ಗಳ ಲಾಭಾಂಶ ಮತ್ತು ವಿವಿಧ ಸಾಲ ಸೌಲಭ್ಯಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.

ನಗರದ ಎಬಿಸಿ ಬುಕ್ ಸೆಂಟರ್ ಸಮೀಪದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಗಮದ ನವೀಕೃತ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಹಕಾರಿ ಬ್ಯಾಂಕ್‌ಗಳು ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ, ಕೃಷಿ ಯಂತ್ರೋಪಕರಣಗಳ ಖರೀದಿ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳಿಗೆ ಅಗತ್ಯ ಆರ್ಥಿಕ ನೆರವು ಒದಗಿಸುತ್ತಿವೆ. ಇದರಿಂದ ರೈತರು ಖಾಸಗಿ ಸಾಲದ ಅವಲಂಬನೆಯಿAದ ಹೊರಬಂದು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳು ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕ್‌ನ ಸದಸ್ಯತ್ವ ಪಡೆದು ಅದರ ವಿವಿಧ ಯೋಜನೆಗಳು ಹಾಗೂ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸರ್ಕಾರವೂ ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಬದ್ಧವಾಗಿದೆ, ಹಾಗೂ ಪ್ರಾಥಮಿಕ ಸಹಕಾರಿ ಕೃಷಿ ಅಭಿವೃದ್ಧಿಗೆ ಶಾಸಕರಿಂದ ೧೦ ಲಕ್ಷ ಅನುದಾನವನ್ನು ಕೂಡ ಸ್ಥಳದಲ್ಲಿ ಘೋಷಣೆ ಮಾಡಿದರು.

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾದ ಜೆ ಶಿವಪ್ರಕಾಶ್ ಮಾತನಾಡಿ ಸ್ವತಂತ್ರ ಪೂರ್ವದಲ್ಲಿ ಚಿತ್ರದುರ್ಗದಲ್ಲಿ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಕೆಂಗಲ್ ಹನುಮಂತಯ್ಯ ನವರು ಈ ಒಂದು ಸಂಘಕ್ಕೆ ಅಡಿಪಾಯವನ್ನು ಹಾಕಿದ್ದಾರೆ ಜೊತೆಗೆ ರೈತರಿಗೆ ಅನುಕೂಲವಾಗಬೇಕೆನ್ನುವ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ರೂಪಿಸಿ ರೈತರ ದೂರದೃಷ್ಟಿಯನ್ನು ಇಟ್ಟುಕೊಂಡು ಸಾಲ ಸೌಲಭ್ಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಇದರ ಲಾಭಾಂಶದಿAದಲೇ ರೈತರಿಗೆ ಮತ್ತಷ್ಟು ಅನುಕೂಲ ಆಗಬೇಕೆನ್ನುವ ನಿಟ್ಟಿನಲ್ಲಿ ಬೇರೆ ಬೇರೆ ಮೊಳಕೆಗಳನ್ನು ತೆರೆದು ಬರುವಂತಹ ಲಾಭಗಳಿಂದ ರೈತರಿಗೆ ಸಾಲದ ಮುಖಾಂತರ ಆರ್ಥಿಕವಾಗಿ ಅಭಿವೃದ್ಧಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು,

 

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಅಧಿಕಾರಿಗಳು ಸಂಪೂರ್ಣ ಬೆಂಬಲದೊAದಿಗೆ ಚಿತ್ರದುರ್ಗ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕು, ಉತ್ತಮ ಲಾಭಾಂಶದಲ್ಲಿ ಮುಂದೆ ಸಾಗುತ್ತಿದೆ ಇದರಿಂದ ನೇರವಾಗಿ ರೈತರಿಗೆ ಸಾಕಷ್ಟು ಬೇರೆ ಬೇರೆ ರೂಪದಲ್ಲಿ ಆಗುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷರಾದ ಪಿ.ಜೆ ಶಿವಪ್ರಸಾದ್, ಉಪಾಧ್ಯಕ್ಷರಾದ ಎಂಎಸ್ ಶರಣಪ್ಪ, ನಿರ್ದೇಶಕರಾದ ರವಿ ಜಗದೀಶ್ ವಿಜಯಕುಮಾರ್ ಸತೀಶ್ ಮಾರುತಿ ಮೌನೇಶ್ ಕೊಟ್ರೇಶ್ ಪದ್ಮ ವನಜಾಕ್ಷಮ್ಮ ಸುನಿಲ್ ನಾಗಪ್ಪ ಹಾಗೂ ಸರ್ಕಾರಿ ನಾಮ ನಿರ್ದೇಶಕರಾದ ನಿರಂಜನ್ ಮೂರ್ತಿ ಹಾಗೂ ಇತರರು ಇದ್ದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon