ಚಿತ್ರದುರ್ಗ:ರಾಜ್ಯದ ಇತಿಹಾಸದಲ್ಲಿ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಹೊಸ ದಾಖಲೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಪುಟ ಸೇರಲಿದೆ ಎಂದು ಶಾಸಕ ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು 9 ಬಾರಿ ಶಾಸಕರಾಗಿ ಸೇವೆ ಸಲ್ಲಿಸುವುದರ ಜೊತೆಗೆ, ಎರಡು ಬಾರಿ ವಿಪಕ್ಷ ನಾಯಕರಾಗಿ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಗಳಾಗಿ ಹಾಗೂ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗಿ 16 ಬಾರಿ ಆಯವ್ಯಯ ಮಂಡನೆ ಮಾಡಿ ದಾಖಲೆಯನ್ನು ನಿರ್ಮಿಸಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ಮಾಡಿರುವುದು ಅತ್ಯಂತ ಸಂತಸದ ವಿಚಾರವಾಗಿದೆ. ಈ ವರೆಗೆ ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದ ದೇವರಾಜ ಅರಸು ಅವರ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಈಗಾಲೇ ಎಲ್ಲರಿಗಿಂತ ಮುಂದಿದ್ದು, 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ ಆಗಿದ್ದರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ಚಿತ್ರದುರ್ಗದ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದ್ದಾರೆ.

































