ಬೆಂಗಳೂರು : ಬಿಜೆಪಿಯವರಿಗೆ ಸಣ್ಣ ವಿಷಯಕ್ಕೂ ರಾಜೀನಾಮೆ ಕೇಳೋದು ಚಾಳಿಯಾಗಿದೆ. ಹೊಸ ವರ್ಷಕ್ಕಾದ್ರೂ ಬಿಜೆಪಿಯವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಕಾಂಗ್ರೆಸ್ ಶಾಸಕ ಕೋನರೆಡ್ಡಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಡೆತ್ ನೋಟ್‌ನಲ್ಲಿ ಕಾರ್ಪೊರೇಟರ್ ಹೆಸರು ಬರೆದಿದ್ದಾರೆ. ಅನೇಕ ಜನರು ನಮ್ಮ ಜೊತೆಗೂ ಫೋಟೋ ತೆಗೆಸಿಕೊಳ್ತಾರೆ. ಹಾಗಾಂತ ಪ್ರಿಯಾಂಕ್ ಖರ್ಗೆ ಮೇಲೆ ಆರೋಪ ಮಾಡೋದು ಸರಿಯಲ್ಲ. ಸಣ್ಣ ವಿಷಯಕ್ಕೂ ರಾಜೀನಾಮೆ ಕೊಡಬೇಕು ಅನ್ನೋದು ಬಿಜೆಪಿಯ ಚಾಳಿ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ತಿಳಿಸಿದ್ದಾರೆ.
ರಾಜಕಾರಣಿಗಳು ಬೇರೆ ಬೇರೆಯವರ ಜೊತೆ ಇರುತ್ತಾರೆ. ಬಿಜೆಪಿಯವರಿಗೆ ಬೇರೆ ಉದ್ಯೋಗ ಇಲ್ಲ. ಪೊಲೀಸ್ ಠಾಣೆ ಮುಂದೆ ಹೋಗೋದು ಪ್ರತಿಭಟನೆ ಮಾಡೋದು, ಸುಮ್ಮನೆ ಆರೋಪ ಮಾಡೋದು ಅಷ್ಟೇ ಕೆಲಸ. ಪ್ರಿಯಾಂಕ್ ಖರ್ಗೆ ಮೇಲೆ ಏನಾದ್ರೂ ಆರೋಪ ಇದೆಯಾ ಹೇಳಿ? ಎಲ್ಲೋ ನಡೆದಿದ್ದಕ್ಕೆ ಅವರ ಮೇಲೆ ಆರೋಪ ಮಾಡೋದು ಸರಿಯಲ್ಲ. ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಒಬ್ಬ ಮುತ್ಸದ್ದಿ ರಾಜಕಾರಣಿ. ವಿಪಕ್ಷಗಳನ್ನು ಟೀಕೆ ಮಾಡ್ತಾರೆ ಎಂದು ಅವರ ರಾಜೀನಾಮೆ ಕೇಳೋದು ಸರಿಯಲ್ಲ. ನನ್ನ ರಾಜಕೀಯ ಜೀವನದಲ್ಲಿ ಇಂತಹ ವಿಪಕ್ಷ ನಾನು ನೋಡೇ ಇಲ್ಲ. ಬಿಜೆಪಿ ಒಳಗೆ ಯತ್ನಾಳ್, ರಮೇಶ್ ಜಾರಕಿಹೋಳಿ, ಅಶೋಕ್ ಎಲ್ಲರ ಮಧ್ಯೆ ಕಿತ್ತಾಟ ಶುರುವಾಗಿದೆ. ಮೊದಲು ನಿಮ್ಮ ಮನೆ ನೋಡಿಕೊಳ್ಳಿ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.