ಹೊಳಲ್ಕೆರೆ : ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಅತ್ಯುತ್ತಮ ಶಾಲಾ-ಕಾಲೇಜು, ಹಾಸ್ಟೆಲ್ಗಳನ್ನು ತೆರೆಯಲಾಗಿದೆ ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪಠ್ಯೇತರ ಚಟುವಟಿಕೆಗಳು ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಗಾಟಿಸಿ ಮಾತನಾಡಿದರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕವಾಗಿ ಬಲಶಾಲಿಗಳಾಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಹಾಸ್ಟೆಲ್ಗಳನ್ನು ಕಟ್ಟಲಾಗಿದೆ. ಮೂಲ ಸೌಲಭ್ಯಗಳ ಜೊತೆಗೆ ನುರಿತ ಶಿಕ್ಷಕರಗಳಿದ್ದಾರೆ. ಸರ್ಕಾರ ಶಿಕ್ಷಣಕ್ಕಾಗಿ ಎಲ್ಲಾ ರೀತಿಯ ನೆರವು ನೀಡುತ್ತಿದೆ. ಉಳಿದಂತೆ ಪಾಠಗಳ ಕಡೆ ನಿಗಾವಹಿಸಿ ಉತ್ತಮ ಅಂಕಗಳನ್ನು ಪಡೆಯುವ ಜವಾಬ್ದಾರಿ ನಿಮ್ಮದು. ಶಿಕ್ಷಣದ ಜೊತೆ ಪಠ್ಯದ ಕಡೆ ಆಸಕ್ತಿ ವಹಿಸಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕಿವಿಮಾತು ಹೇಳಿದರು.
ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಶಿಕಲಾ ಎಸ್. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರುಗಳಾದ ಡಿ.ಎಸ್.ಪ್ರವೀಣ್ಕುಮಾರ್
ಮಂಜುನಾಥ್, ಕಲ್ಲೇಶ್, ರಾಜು, ಶಿವಣ್ಣ, ಕೊಟ್ರೇಶ್, ನಾಡಿಗಾರ್, ಸತ್ಯನಾರಾಯಣ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.