ಕೋಲ್ಕತ್ತಾ : ಭಾರತದ Gen Z ಪೀಳಿಗೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ ಎಂದು ಬಂಗಾಳದಲ್ಲಿ ಬಿಎಂಸಿಯ ದೊಡ್ಡ ವಿಜಯವನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ Gen Z ಬಿಜೆಪಿಯ ಅಭಿವೃದ್ಧಿ ಕ್ರಮದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಜಯವನ್ನು ಉಲ್ಲೇಖಿಸಿದ್ದಾರೆ. ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ದಾಖಲೆಯ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ. ಬಂಗಾಳದ ಮತದಾರರು ಈ ಬಾರಿ ಬಿಜೆಪಿಯನ್ನು ಆಯ್ಕೆ ಮಾಡುತ್ತಾರೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
































