ನವದೆಹಲಿ : ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ ಯಾವುದೇ ತಪ್ಪಿಲ್ಲದೆ ಕಾರ್ಯಚರಣೆ ನಡೆಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ದಾಳಿಯ ಬಳಿಕ ಭದ್ರತೆಯ ಕುರಿತು ಸಂಪುಟ ಸಮಿತಿ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಸಭೆಯಲ್ಲಿ ಮಾತನಾಡಿದ ಮೋದಿ , ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ ಎಂದು ಹೇಳಿದರು.
ಮೋದಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯ ಬಗ್ಗೆ ವಿವರಿಸಿದರು. ಇದು “ನಮಗೆಲ್ಲರಿಗೂ ಹೆಮ್ಮೆಯ ಕ್ಷಣ” ಎಂದು ಬಣ್ಣಿಸಿದರು. ಇಡೀ ದೇಶ ಭಾರತೀಯ ಸೇನೆಯೊಂದಿಗಿದೆ ಎಂದು ಹೇಳಿದರು.
ತಡರಾತ್ರಿಯಲ್ಲಿ ಭಾರತವು ಪಾಕಿಸ್ತಾನದಲ್ಲಿರುವ ಒಟ್ಟು ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತು. ಸೇನೆಯು ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ತಿಳಿಸಿದೆ.