ಕಲಬುರಗಿ : ಭಾರತ-ಪಾಕಿಸ್ತಾನದ ನಡುವಿನ ಕದನ ವಿರಾಮದ ಕುರಿತು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸತ್ಯ ಹೇಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕದನ ವಿರಾಮ ಘೋಷಣೆ ಅಮೆರಿಕ ಮಾಡಿಸಿದೆಯೋ ಅಥವಾ ಖುದ್ದು ಮೋದಿಯವರೇ ಮಾಡಿದ್ದಾರೋ ಎಂಬುದನ್ನು ದೇಶದ ಜನರಿಗೆ ಸ್ಪಷ್ಟಪಡಿಸಬೇಕು ಎಂದರು.
ದೇಶದ ಜನರ ಮುಂದೆ ಈ ಸತ್ಯ ಮೋದಿ ಹೇಳಬೇಕು. ಅವರು ಕೇವಲ ಸೋಷಿಯಲ್ ಮೀಡಿಯಾ ಬಳಸಿಕೊಂಡು ಯುದ್ಧ ಮಾಡುತ್ತಿದ್ದಾರೆ. ಆದರೂ ಈ ಕಾರ್ಯಾಚರಣೆಯಲ್ಲಿ ಮೋದಿಯವರಿಗೆ ಕಾಂಗ್ರೆಸ್ ತನ್ನ ಸಂಪೂರ್ಣ ಬೆಂಬಲ ನೀಡಿದೆ. ಇಷ್ಟಾದರೂ ಪ್ರಧಾನಿ ಮೋದಿ ಸರ್ವ ಪಕ್ಷಗಳೊಂದಿಗೆ ಚರ್ಚಿಸುತ್ತಿಲ್ಲ. ಸಂಸತ್ ಅಧಿವೇಶನ ಕೂಡ ಕರೆಯುತ್ತಿಲ್ಲ ಎಂದು ಹೇಳಿದರು.