ನವದೆಹಲಿ : ನ್ಯೂಕ್ಲಿಯರ್ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಯಾವುದೇ ರೀತಿಯ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಭಾರತದ ಸರ್ಜಿಕಲ್ ದಾಳಿಗಳು ಪಾಕಿಸ್ತಾನದ ಯುದ್ಧ ಸಿದ್ಧತೆಗಳನ್ನು ಛಿದ್ರಗೊಳಿಸಿವೆ ಎಂದು ಹೇಳಿದರು.
ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಯಿತು. ಆದರೆ ಭಾರತ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ನಾಶಮಾಡುವ ಮೂಲಕ ಅವರ ಹೃದಯವನ್ನು ಹೊಡೆದು ಹಾಕಿತು ಎಂದರು.ಭಾರತ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಪರಮಾಣು ಅಸ್ತ್ರ ಬಳಕೆ ಮಾಡುತ್ತೇವೆ ಎಂದು ಪಾಕಿಸ್ತಾನ ಎಚ್ಚರಿಕೆ ನೀಡುತ್ತಿತ್ತು. ಈಗ ಮೋದಿಯವರು ನಿಮ್ಮ ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ. ನಾವು ಯಾವ ರೀತಿ ಪ್ರತಿಕ್ರಿಯೆ ನೀಡಬೇಕೋ ನಾವು ಅದೇ ರೀತಿಯ ಪ್ರತಿಕ್ರಿಯೆ ನೀಡುತ್ತೇವೆ ಎಂದು ಹೇಳುವ ಮೂಲಕ ಭಾರತ ಎಲ್ಲದ್ದಕ್ಕೂ ಸಿದ್ಧವಿದೆ ಎಂಬ ಸಂದೇಶವನ್ನು ನೀಡಿದರು.