ನವದೆಹಲಿ: ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ವಿಕ್ಕಿ ಕೌಶಲ್ ನಟನೆಯ `ಛಾವಾ’ ಸಿನಿಮಾವನ್ನು ಮಾ.27 ರಂದು ಸಂಸತ್ತಿನಲ್ಲಿ ವೀಕ್ಷಿಸಲಿದ್ದಾರೆ.
ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ `ಛಾವಾ’ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ ಬಾಲಯೋಗಿ ಸಭಾಂಗಣದಲ್ಲಿ ಪ್ರದರ್ಶಿಸಲಾಗುವುದು.
ಛಾವಾ ಸಿನಿಮಾದ ಪ್ರದರ್ಶನದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಸೇರಿದಂತೆ ಎಲ್ಲಾ ಕೇಂದ್ರ ಸಚಿವರು ಭಾಗಿಯಾಗುವ ನಿರೀಕ್ಷೆಯಿದೆ.
ಜೊತೆಗೆ ಛಾವಾ ಸಿನಿಮಾದಲ್ಲಿ ಸಂಭಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಂಡಿರುವ ವಿಕ್ಕಿ ಕೌಶಲ್ ಹಾಗೂ ಇಡೀ ಸಿನಿಮಾ ತಂಡವು ಪಾಲ್ಗೊಳ್ಳುವ ನಿರೀಕ್ಷೆ ಇದೆ.