ಮುಂಬೈ : ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ತನ್ನ ಮೋಹಕ ಕಣ್ಣುಗಳ ಮೂಲಕ ಎಲ್ಲರ ಗಮನ ಸೆಳೆದಿದ್ದ ಮೊನಾಲಿಸಾ ತನ್ನ ಮೊದಲ ಚಿತ್ರದಲ್ಲಿ ನಟಿಸಲು ಬರೋಬ್ಬರಿ 21 ಲಕ್ಷ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.
ಸದ್ಯ ಬಾಲಿವುಡ್‌ನ `ದಿ ಡೈರಿ ಆಫ್ ಮಣಿಪುರ್’ ಚಿತ್ರದಲ್ಲಿ ನಟಿಸಲು ಮೊನಾಲಿಸಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಟಿಸಲು ಬರೋಬ್ಬರಿ 21 ಲಕ್ಷ ರೂ. ಪಡೆದಿದ್ದಾರೆ. ಇದರೊಂದಿಗೆ ಸ್ಥಳೀಯ ಚಿತ್ರದ ಪ್ರಚಾರಕ್ಕಾಗಿ 15 ಲಕ್ಷ ರೂ. ಪಡೆದಿದ್ದಾರೆ ಎನ್ನಲಾಗಿದೆ.
ಇನ್ನೂ ಬರಹಗಾರ ಹಾಗೂ ನಿರ್ದೇಶಕ ಸನೋಜ್ ಮಿಶ್ರಾ ಅವರು ಮೊನಾಲಿಸಾಳ ಮನೆಗೆ ಭೇಟಿ ನೀಡಿದ್ದು, ಅವರ ಕುಟುಂಬದವರ ಒಪ್ಪಿಗೆ ಮೇರೆಗೆ ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾದಲ್ಲಿ ನಟಿಸಲು ಮೊನಾಲಿಸಾ ಒಪ್ಪಿಗೆ ಸೂಚಿಸಿದ್ದಾರೆ.