ಚಿತ್ರದುರ್ಗ: ಪಂಚ್ ಗ್ಯಾರಂಟಿ ಹೆಸರಿನಲ್ಲಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ, ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಬಿಜೆಪಿ.ಕಾರ್ಯದರ್ಶಿಗಳಾದ ಅಂಬಿಕಾ ಹುಲಿನಾಯ್ಕರ್ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಹಿಂದುಳಿದ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯ ವಾಗುತ್ತಿಲ್ಲ. ಮುಸ್ಲಿಂ ಸಮುದಾಯವನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲು ಹೊರಟಿದೆ. ಸಿದ್ದ ರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಬಡವರ ಹೊಟ್ಟೆ ಮೇಲೆ ಹೊಡೆದ ಕಾಂಗ್ರೆಸ್ ಸರ್ಕಾರ ತೊಲಗಬೇಕು. ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಕ್ಕೆ ಮೀಸಲಿಟ್ಟ ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ ಹಣ ನುಂಗಿದೆ. ಎಸ್ಸಿಪಿ-ಟಿಎಸ್ಪಿ ಅನುದಾನ ಅನ್ಯ ಯೋಜನೆಗಳಿಗೆ ಬಳಕೆ ಮಾಡಬಾರದು ಎಂದು ಕಾನೂನಿನಲ್ಲಿ ಇದೆ. ಆದರೆ, ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿಗೆ ಬಳಕೆ ಮಾಡಿದ್ದು ಖಂಡನೀಯ. ಚುನಾವಣೆ ಪೂರ್ವದಲ್ಲಿ ಎಸ್ಸಿ,ಎಸ್ಟಿ ಸಮುದಾಯ ಸೇರಿ ಎಲ್ಲರಿಗೂ ನ್ಯಾಯ ಕೊಡುವುದಾಗಿ ಹಾಗೂ ಅಭಿವೃದ್ಧಿ ಮಾಡುವುದಾಗಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ ಎಂದರು.
ಖನಿಜ ನಿಗಮದ ಮಾಜಿ ಆಧ್ಯಕ್ಷರಾದ ಲಿಂಗಮೂರ್ತಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ದಲಿತರಿಗಾಗಿ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗಳಿಗೆ ಖರ್ಚು ಮಾಡಿದೆ. ಸರಕಾರದಲ್ಲಿ ದುಡ್ಡಿಲ್ಲ, ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ದಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ. ನಾನು ಸಿದ್ದಣ್ಣ, ಲೂಟಿ ಗ್ಯಾರಂಟಿ ಅಣ್ಣ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ ಎಂದು ಆಕ್ಷೇಪಿಸಿದರು. ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಬುಡಕಟ್ಟು ಜನಾಂಗ, ಅಲೆಮಾರಿ, ಅರೆಅಲೆಮಾರಿಗಳ ಅಭ್ಯುದಯಕ್ಕಾಗಿ ಮೀಸಲಿಟ್ಟಿರುವ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕಾಗಿ ಬಳಸುತ್ತಿರುವುದು ಅಕ್ಷಮ್ಯ ಅಪರಾಧ. ಹಾಗಾಗಿ ಈ ಬಾರಿಯ ಬಜೆಟ್ನಲ್ಲಿ ಎಸ್ಸಿಪಿ. ಟಿ.ಎಸ್ಪಿ. ಹಣವನ್ನು ಬೇರೆ ಉದ್ದೇಶಗಳಿಗೆ ಬಳಸುವುದಿಲ್ಲವೆಂದು ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ಪ್ರತಿಭಟನೆಯಲ್ಲಿ ಎಸ್ಸಿಪಿ. ಟಿಎಸ್ಪಿ. ರಾಜ್ಯ ಜನಾಂದೋಲನ ಸಮಿತಿ ಸದಸ್ಯ ಸಂಸದರು ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜೀ ಶಾಸಕಸರಾದ ಎಸ್,ಕಡೆ.ಬಸವರಾಜನ್, ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಖಂಜಾಚಿ ಮಾಧುರಿ ಗೀರಿಶ್, ರೈತ ಮೋರ್ಚಾದ ವೆಂಕಟೇಶ್ ಯಾದವ್, ಸೋಮುನಾಥ್, ಮೋಹನ್, ಯೋಗಿಶ್ ಸಹ್ಯಾದ್ರಿ,ಹನುಮಂತಪ್ಪ, ಎಸ್ಸಿ. ಮೋರ್ಚಾ ಹನುಮಂತಪ್ಪ ಓಬಲೇಶ್, ಓ.ಬಿ.ಸಿ.ಮೋರ್ಚಾದ ನರೇಂದ್ರ ರಂಗಪ್ಪ, ಎಸ್ಸಿ ಮೋರ್ಚಾ ಶಿವಣ್ಣ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ಬೇದ್ರೇ ನಾಗರಾಜ್, ಛಲವಾದಿ ತಿಪ್ಪೇಸ್ವಾಮಿ, ಜಯಪಾಲಯ್ಯ, ಕುಮಾರಸ್ವಾಮಿ, ರಾಮದಾಸ್, ಶಿವಣ್ಣ, ತಿಪ್ಪೇಸ್ವಾಮಿ, ರಘುಮೂರ್ತಿ, ಬಸಮ್ಮ, ಕಾಂಚನಾ, ಅಂಬಿಕಾ ಶಂಭೂ, ಲೋಕೇಶ್ ನಾಗರಾಜ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ದಲಿತ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.