ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ತುಮಕೂರು, ವಿಜಯನಗರ, ಹಾಸನ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


































