ದೆಹಲಿ: ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಂದು ಬೆಳಗ್ಗೆ 11 ಗಂಟೆಗೆ ಸಭೆ ಸೇರಲಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಜೆಟ್ ಅಧಿವೇಶನವು ಜನವರಿ 31 ರಂದು ಪ್ರಾರಂಭವಾಗಿ ಏಪ್ರಿಲ್ 4 ರಂದು ಕೊನೆಗೊಂಡಿತ್ತು. ಆಗ ಎರಡೂ ಸದನಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕೆಂಬ ವಿರೋಧ ಪಕ್ಷದ ನಾಯಕರು ಬೇಡಿಕೆ ಮುಂದಿಟ್ಟಿದ್ದರು.
ಈ ಅಧಿವೇಶನದಲ್ಲಿ ಉಗ್ರರ ಅಡಗುದಾಣಗಳ ಮೇಲೆ ದಾಳಿ ನಡೆಸಿದ ಕುರಿತು ಚರ್ಚೆ ನಡೆಯಲಿವೆ. ಚರ್ಚೆಯ ನಂತರ ಕೇಂದ್ರ ಸರ್ಕಾರದಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದಲ್ಲಿ ಹಾನಿಯಾಗಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಲಿದೆ.
 
				 
         
         
         
															 
                     
                     
                     
                     
                    


































 
    
    
        