ಚಿತ್ರದುರ್ಗ 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
10ನೇ ತರಗತಿ ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇವಾಸಿಂಧು ತಂತ್ರಾAಶದ ಮೂಲಕ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೇ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.