ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://erp.dom.karnataka.hov.in/adm/admission/studentHalltiket ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
































