ಬೆಂಗಳೂರು : ಹೊರ ರಾಜ್ಯಗಳಿಂದ ಬಂದವರಿಂದಲೇ ಕರ್ನಾಟಕದಲ್ಲಿ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ರಿತೇಶ್ ಕುಮಾರ್ ಎಂಬಾತ ಬಾಲಕಿಯನ್ನು ಹತ್ಯೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ಕುರಿತು ಮಾತನಾಡಿದ ಅವರು, ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ. ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ ಎಂದಿದ್ದಾರೆ.