ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ದೂರಿನ ಆಧಾರದಲ್ಲಿ ಈಗಾಗಲೇ ಶಿಕ್ಷಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದ ಈ ಶಿಕ್ಷಕ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕೂಡ ಪಡೆದಿದ್ದ ಎನ್ನಲಾಗಿದೆ. ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಇತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು,ಜಿಲ್ಲಾ ಮಕ್ಕಳ ರಕ್ಷಣ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ.ಅಲ್ಲದೇ ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು ಎನ್ನಲಾಗಿದೆ.