ರಾಯ್ಪುರ್ : ಛತ್ತೀಸ್‌ಗಢ ಹಾಗೂ ತೆಲಂಗಾಣ ಗಡಿಯಲ್ಲಿರುವ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 15ಕ್ಕೂ ಹೆಚ್ಚು ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಅಂತರರಾಜ್ಯ ಗಡಿಯಲ್ಲಿರುವ ಕರ್ರೆಗುಟ್ಟ ಬೆಟ್ಟದ ಅರಣ್ಯದಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿಯವರೆಗೆ ೧೫ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏ.21 ರಂದು ನಕ್ಸಲರು ಬಸ್ತಾರ್‌ನ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಆಪರೇಷನ್ ಸಂಕಲ್ಪ ಹೆಸರಿನಲ್ಲಿ ಈ ಕಾರ್ಯಾಚರಣೆಯು ನಡೆಯುತ್ತಿದೆ. ಎನ್‌ಕೌಂಟರ್‌ನಲ್ಲಿ ಜಿಲ್ಲಾ ಮೀಸಲು ಪಡೆ, ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ, ರಾಜ್ಯ ಪೊಲೀಸ್ ಘಟಕಗಳು, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು CoBRA ಘಟಕ ಸೇರಿದಂತೆ 24,000 ಭದ್ರತಾ ಸಿಬ್ಬಂದಿ ಭಾಗಿಯಾಗಿದ್ದಾರೆ.