ಗೋವಾ : ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ.
ಸದ್ಯ ಘಟನೆ ಕುರಿತು ಸಿಎಂ ಪ್ರಮೋದ್ ಸಾವಂತ್ ಆಘಾತ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಗೋವಾದ ಶಿರ್ಗಾಂವ್ ಗ್ರಾಮದಲ್ಲಿ ದೇವಿ ಲೈರೈ ಜಾತ್ರೆಯಲ್ಲಿ ಶನಿವಾರ ಮುಂಜಾನೆ ಈ ಘಟನೆ ಸಂಭವಿಸಿದೆ.