45 ದಿನದ ಮಗುವನ್ನು ಹೆತ್ತ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಮಗುವನ್ನು ಭೀಕರವಾಗಿ ಹತ್ಯೆಗೈದಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ಪವನ್ ಹಾಗೂ ರಾಧೆ ದಂಪತಿಗೆ ಈ ಒಂದು ಗಂಡು ಮಗು ಜನಿಸಿತ್ತು. ಆದ್ರೆ ಪವನ್ ಮನೆ ನಿಭಾಯಿಸದೆ ಕುಡಿತದ ಚಟಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆಯಲ್ಲಿ ತಡರಾತ್ರಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ.
ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರಾಧಾಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪವನ್ ನನ್ನು ಸಹ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ.