ಬೆಂಗಳೂರು: ಮುಡಾ ಕೆಸ್‌ನಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಅಂತಿಮ ವರದಿ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಸಾಬೀತಾಗಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಬರೆದ ಪತ್ರದಲ್ಲಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.