ಬೆಂಗಳೂರು :ಮುಡಾ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು? ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ನ್ಯಾಯ ದೊರೆಯುವ ಭರವಸೆ
ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು.
ಇ.ಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ:
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಯಿಸಿದ ಅವರು,ಇ. ಡಿ ನೋಟೀಸು ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು