ಬೆಂಗಳೂರು: ಕಾಂತಾರ ಚಾಪ್ಟರ್ 1 ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆಪ್ಟೆಂಬರ್.22ರಂದು ಟ್ರೇಲರ್ ರಿಲೀಸ್ ಆಗಲಿದೆ.
ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್.2ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ಸೆ.22ರಂದು ಬಿಡುಗಡೆ ಆಗಲಿದೆ.
ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರು ಬಹು ನಿರೀಕ್ಷಿತ ಕಾಂತಾರ ಅಧ್ಯಾಯ 1 ಚಿತ್ರ 2025ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ಅಕ್ಟೋಬರ್.2ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ.
ಕಾಂತಾರ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸನ್ನು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದ್ದು, ಇದೀಗ ಕಾಂತಾರ ಚಾಪ್ಟರ್.1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.