ನವದೆಹಲಿ: ಕೀರ್ತಿ ಕಿಶನ್‌ನ ಯೂನಿಯನ್ ನಾಯಕ ಬಲದೇವ್ ಸಿಂಗ್ ಅವರ ಪುತ್ರಿ ಪಂಜಾಬ್‌ನ ಬಹುಭಾಷಾ ನಟಿ ಸೋನಿಯಾ ಮನ್ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಎಎಪಿ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ನಟಿ ಸೋನಿಯಾ ಮನ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಎಎಪಿಯ ಪಂಜಾಬ್ ಘಟಕವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೀರ್ತಿ ಕಿಸಾನ್ ಯೂನಿಯನ್ ನಾಯಕ ಎಸ್ ಬಲದೇವ್ ಸಿಂಗ್ ಅವರ ಪುತ್ರಿ ಹಾಗೂ ಪಂಜಾಬಿ ನಟಿ ಸೋನಿಯಾ ಮಾನ್ ಅವರು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ಅವರನ್ನು ಆಮ್ ಆದ್ಮಿ ಪಕ್ಷದ ಕುಟುಂಬಕ್ಕೆ ಸ್ವಾಗತಿಸುತ್ತಿದ್ದೇವೆ’ ಎಂದು ಬರೆದುಕೊಂಡಿದೆ.
ಸೋನಿಯಾ ಮಾನ್ ಅವರು ಮಲೆಯಾಳಂ, ಹಿಂದಿ, ತೆಲುಗು ಹಾಗೂ ಮರಾಠಿ ಸೇರಿದಂತೆ ವಿವಿಧ ಭಾಷಾ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಸೋನಿಯಾ ತಂದೆ ಬಲದೇವ್ ಸಿಂಗ್ ಮಾಜಿ ನಾಯಕ ಮತ್ತು ಕಾರ್ಯಕರ್ತರಾಗಿದ್ದರು. ಅವರನ್ನು 1980 ರಲ್ಲಿ ಖಲಿಸ್ತಾನಿ ಉಗ್ರಗಾಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.