ಇಸ್ಲಾಮಾಬಾದ್ : ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಲಾಹೋರ್ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಜಮಾತ್-ಉದ್-ದವಾ (JuD) ಪ್ರಕಾರ, ಪ್ರೊ.ಅಬ್ದುಲ್ ರಹಮಾನ್ ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಹೆಚ್ಚಿನ ಮಧುಮೇಹದ ನಂತರ ಲಾಹೋರ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
“ಇಂದು ಮುಂಜಾನೆ ಮಕ್ಕಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು ಮತ್ತು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು” ಎಂದು ಜೆಯುಡಿ ಅಧಿಕಾರಿಯೊಬ್ಬರು ತಿಳಿಸಿದರು.ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ನ ಸೋದರ ಮಾವನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತು.